ADVERTISEMENT

ಪುತ್ತೂರು: ಕಾಂಕ್ರಿಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಸಾವು

ರಸ್ತೆ ಕಾಂಕ್ರಿಟೀಕರಣದ ವೇಳೆ ನಡೆದ ಅವಘಡ

​ಪ್ರಜಾವಾಣಿ ವಾರ್ತೆ
Published 24 ಮೇ 2025, 13:53 IST
Last Updated 24 ಮೇ 2025, 13:53 IST
ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ವಾಹನ ಹಿಂದಕ್ಕೆ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಚಕ್ರದಡಿಗೆ ಬಿದ್ದು ಕಾರ್ಮಿಕೆ ಮೃತಪಟ್ಟಿದ್ದಾರೆ
ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ವಾಹನ ಹಿಂದಕ್ಕೆ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಚಕ್ರದಡಿಗೆ ಬಿದ್ದು ಕಾರ್ಮಿಕೆ ಮೃತಪಟ್ಟಿದ್ದಾರೆ   

ಪುತ್ತೂರು: ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ವಾಹನ ಹಿಂದಕ್ಕೆ ಚಲಿಸಿದಾಗ ವಾಹನದ ಚಕ್ರದಡಿಗೆ ಬಿದ್ದು ಕಾರ್ಮಿಕೆಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಎಂಬಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬೊಮ್ಮಾಳ ಗ್ರಾಮದ ಬಸವರಾಜು ಅವರ ಪತ್ನಿ ಗೌರಮ್ಮ (28) ಮೃತಪಟ್ಟವರು.

ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ವಗಿರಿಯಿಂದ ಎಂಪೆಕಲ್ಲು ಸಂಪರ್ಕಿಸುವ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ನಡೆದ ಅವಘಡದಲ್ಲಿ ಗೌರಮ್ಮ ಅವರ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಮೂರು ವಾರಗಳಿಂದ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿದ್ದು, ಶುಕ್ರವಾರ ಸಂಜೆ ಕಾಮಗಾರಿ ಮುಕ್ತಾಯದ ಹಂತದಲ್ಲಿತ್ತು. ಕಾಮಗಾರಿ ಗುತ್ತಿಗೆದಾರರಿಗೆ ಸೇರಿದ್ದ ಮಿಲ್ಲರ್ ವಾಹನದಲ್ಲಿ ಗೌರಮ್ಮ ಅವರ ದೊಡ್ಡಪ್ಪನ ಮಗ ಸೋಮನಾಥ್ ಚಾಲಕನಾಗಿದ್ದರು.

ಘಟನಾ ಸ್ಥಳಕ್ಕೆ ಸಂಪ್ಯ ಠಾಣೆ ಎಸ್ಐ ಜಂಬೂರಾಜ್ ಮಹಾಜನ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವರಾಜು ನೀಡಿದ ದೂರಿನಂತೆ ಸೋಮನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.