ADVERTISEMENT

ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 15:07 IST
Last Updated 19 ಏಪ್ರಿಲ್ 2021, 15:07 IST
ಝಾಕೀರ್‌
ಝಾಕೀರ್‌   

ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲ್ಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ.

ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್ (20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ (22) ಮೃತರು. ಅವರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.