ADVERTISEMENT

ಬೆಳಾಲು: ಕಾರು ಡಿಕ್ಕಿಯಾಗಿ ಜಿಂಕೆ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 5:33 IST
Last Updated 22 ಸೆಪ್ಟೆಂಬರ್ 2022, 5:33 IST
ಬೈತಾಡಿ ಎಂಬಲ್ಲಿ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವುದು
ಬೈತಾಡಿ ಎಂಬಲ್ಲಿ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿರುವುದು   

ಉಪ್ಪಿನಂಗಡಿ: ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ.

ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ರಸ್ತೆ ದಾಟಲು ಜಿಗಿದ ಜಿಂಕೆ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿತ್ತು.

ಈ ವಿಚಾರವನ್ನು ಅವರು ತಕ್ಷಣವೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದು, ಅಪಘಾತ ನಡೆದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಇಲಾಖಾ ಅಧಿಕಾರಿಗಳು ಜಿಂಕೆ ಶವವನ್ನು ವಶಕ್ಕೆ ಪಡೆದು ಇಲಾಖಾ ವಿಧಿ ವಿಧಾನ ನಡೆಸಿ ಮಣ್ಣಗುಂಡಿ ಕಾಡಿನಲ್ಲಿ ಅಂತ್ಯವಿಧಿಯನ್ನು ನೆರವೇರಿಸಿದರು.

ADVERTISEMENT

ಸುಮಾರು ಮೂರು ವರ್ಷ ಪ್ರಾಯದ ಗಂಡು ಜಿಂಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಅರಣ್ಯ ಉಪ ವಿಭಾಗದ ಎ.ಸಿ.ಎಫ್. ಕಾರ್ಯಪ್ಪ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮಧುಸೂದನ್, ಉಪ ಅರಣ್ಯಾಧಿಕಾರಿ ಪ್ರಶಾಂತ್, ಅರಣ್ಯ ರಕ್ಷಕ ವಿನಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.