ADVERTISEMENT

ವಿರೋಧ ಪಕ್ಷಗಳ ಷಡ್ಯಂತ್ರ ವಿಫಲ ಮಾಡಿ: ಈರಣ್ಣ ಕಡಾಡಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 12:18 IST
Last Updated 11 ಜನವರಿ 2021, 12:18 IST

ಮಂಗಳೂರು: ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೇ ಕೃಷಿ ಕಾನೂನಿನ ವಾಗ್ದಾನ ಮಾಡಿದ್ದ ಕಾಂಗ್ರೆಸ್‌ ಇದೀಗ, ಕೃಷಿ ಕಾನೂನುಗಳ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಪ್ರತಿಪಕ್ಷಗಳಿಗೆ ಯಾವುದೇ ವಿಷಯವಿಲ್ಲದೇ ರೈತರ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹೊಡೆಯುವ ಕೆಲಸ ಮಾಡುತ್ತಿವೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.

ಬೀಜ ಸೇ ಬಜಾರ್ ತಕ್‌ ಎನ್ನುವ ಧ್ಯೇಯದೊಂದಿಗೆ ರೈತರ ಸಮಗ್ರ ಅಭಿವೃದ್ಧಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಈ ಯೋಜನೆಗಳನ್ನು ತಿಳಿದುಕೊಂಡು, ರೈತರ ಮಧ್ಯೆ ಅವುಗಳ ಚರ್ಚೆ ಮಾಡುವ ಮೂಲಕ ಪ್ರತಿಪಕ್ಷಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT