ADVERTISEMENT

ಆಂಬುಲೆನ್ಸ್‌ನಲ್ಲಿ ಹೆರಿಗೆ: ತಾಯಿ, ಮಗು ಸುರಕ್ಷಿತ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 16:11 IST
Last Updated 25 ಜೂನ್ 2021, 16:11 IST
ಬೆಳ್ತಂಗಡಿ ತಾಲ್ಲೂಕಿನ ಶಿರ್ಲಾಲು ಗ್ರಾಮದ ಮಜಲಡ್ಡ ನಿವಾಸಿ ಲಲಿತಾ ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದರು
ಬೆಳ್ತಂಗಡಿ ತಾಲ್ಲೂಕಿನ ಶಿರ್ಲಾಲು ಗ್ರಾಮದ ಮಜಲಡ್ಡ ನಿವಾಸಿ ಲಲಿತಾ ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದರು   

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಬೆಳ್ತಂಗಡಿಯಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್‌ನಲ್ಲೇ ಹೆರಿಗೆಯಾದ ಘಟನೆ ಶುಕ್ರವಾರ ನಡೆದಿದೆ.

ತಾಲ್ಲೂಕಿನ ಶಿರ್ಲಾಲು ಗ್ರಾಮದ ಮಜಲಡ್ಡ ನಿವಾಸಿ ಲಲಿತಾ (38) ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದವರು.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಡಂತ್ಯಾರು ಸಮೀಪಿಸುತ್ತಿದ್ದಂತೆ ವಿಪರೀತ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯ ಪ್ರವರ್ತರಾದ ಶುಶ್ರೂಶಕಿ ವಿಲ್ಮಾ ಹಾಗೂ ವಾಹನ ಚಾಲಕ ಗಿರೀಶ್ ಅವರ ಸಹಾಯದಿಂದ ಆಂಬುಲೆನ್ಸ್‌ನ ಒಳಗೆ ಹೆರಿಗೆ ಮಾಡಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ADVERTISEMENT

ತಾಯಿ–ಮಗು ಆರೋಗ್ಯವಾಗಿದ್ದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.