ADVERTISEMENT

ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 8:59 IST
Last Updated 30 ಜನವರಿ 2023, 8:59 IST
   

ಮಂಗಳೂರು: 'ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ' ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್‌ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ.

ಅವರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಸೋಮವಾರ ಮನವಿ ಸಲ್ಲಿಸಿದರು.

'ಫಾಝಿಲ್ ಹತ್ಯೆಯನ್ನು ತುಮಕೂರಿನಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮಗನ ಹತ್ಯೆ ವಿಚಾರವಾಗಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು'ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.