ADVERTISEMENT

ಕೊಲ್ನಾಡು: ಮಾದಕ ವಸ್ತುಗಳ ನಾಶ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 4:55 IST
Last Updated 11 ಜುಲೈ 2025, 4:55 IST
ಮೂಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು
ಮೂಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು   

ಮೂಲ್ಕಿ: ಮಾದಕ ವಸ್ತುಗಳಾದ ಗಾಂಜಾ, ಎಂಡಿಎಂಎ ಮಾತ್ರೆಗಳು, ಕೊಕೇನ್‌ ಸಹಿತ ಸುಮಾರು 15.6 ಕೆ.ಜಿ ಮಾದಕ ವಸ್ತುಗಳನ್ನು ಗುರುವಾರ ಮೂಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ಮಂಗಳೂರು ಅಪರಾಧ ವಿಭಾಗದ ಡಿಸಿಪಿ ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ನಾಶಪಡಿಸಲಾಯಿತು.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಂಟು ಠಾಣೆಗಳಿಂದ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.

ಹಿರಿಯ ಅಧಿಕಾರಿಗಳಾದ ಗೀತಾ ಕುಲಕರ್ಣಿ, ಸಿಸಿಬಿ ಇನ್‌ಸ್ಪೆಕ್ಟರ್‌ ರಫೀಕ್, ಮೂಲ್ಕಿ ಇನ್‌ಸ್ಪೆಕ್ಟರ್‌ ಮಂಜುನಾಥ್, ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.