ADVERTISEMENT

ನೆಲ್ಲಿಕಟ್ಟೆ ಶಾಲಾ ಕಟ್ಟಡ ನೆಲಸಮ: ವರದಿ ನೀಡಲು ಡಿ.ಸಿ. ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 4:47 IST
Last Updated 16 ಡಿಸೆಂಬರ್ 2021, 4:47 IST

ಪುತ್ತೂರು: ಕರಾವಳಿ ಭಾಗದಲ್ಲೇ ವಿಶಿಷ್ಟವಾಗಿದ್ದ 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಆರಂಭಿಸಿದ ಐತಿಹಾಸಿಕ ನೆಲ್ಲಿಕಟ್ಟೆ ಸರ್ಕಾರಿ ಶಾಲಾ ಕಟ್ಟಡವನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಭಾನುವಾರ ರಾತ್ರಿ ಶಾಲಾ ಎಸ್‌ಡಿಎಂಸಿ ನೇತೃತ್ವದಲ್ಲಿ ಜೆಸಿಬಿಯಿಂದ ನೆಲಸಮಗೊಳಿಸಿರುವ ಘಟನೆಗೆ ಸಂಬಂಧಿಸಿ ಸಮಗ್ರ ತನಿಖಾ ವರದಿ ನೀಡುವಂತೆ ಜಿಲ್ಲಾಧಿಕಾರಿ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದ್ದಾರೆ.

ವಿದ್ಯಾಂಗ ಉಪನಿರ್ದೇಶಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗೆ ವರದಿ ನೀಡುವಂತೆ ನೋಟಿಸ್ ನೀಡಿದ್ದು, ಶಿಕ್ಷಣಾಧಿಕಾರಿ ಸಿ. ಲೋಕೇಶ್ ಅವರು ಕಟ್ಟಡ ತೆರವಿನ ಕಾರಣ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ನೋಟಿಸ್ ಕಳುಹಿಸಿದ್ದಾರೆ.
‘ನೆಲ್ಲಿಕಟ್ಟೆ ಸರ್ಕಾರಿ ಶಾಲಾ ಕಟ್ಟಡವನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಕಟ್ಟಡ ನೆಲಸಮ ಮಾಡಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ವರದಿ ಪಡೆದು ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT