ಉಜಿರೆ: ದೇಶದ ಪ್ರಗತಿಗೆ ಎಂಜಿನಿಯರ್‌ಗಳ ಸೇವೆ ಮತ್ತು ಕೊಡುಗೆ ಅಮೂಲ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು.
ಉಜಿರೆಯಲ್ಲಿ ನಡೆದ ಎಂಜಿನಿಯರುಗಳ ದಿನಾಚರಣೆ ಮತ್ತು ಅನುಮೋದನೆಗೊಂಡ ವೃತ್ತಿನಿರತ ಸಿವಿಲ್ ಎಂಜಿನಿಯರಿಂಗ್ ವಿಧೇಯಕ-2024 ಕುರಿತ ‘ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಲೋಗೊ ಅನಾವರಣ ಮಾಡಲಾಯಿತು.
ಸಿವಿಲ್ ಎಂಜಿನಿಯರ್‌ಗಳ ರಾಜ್ಯಮಟ್ಟದ ಸಂಘಟನೆಯ ಅಧ್ಯಕ್ಷ ಶ್ರೀಕಾಂತ್ ಎಸ್.ಚನ್ನಲ್ ಮಾತನಾಡಿ, ಪರಿಣತ ಹಾಗೂ ಅಧಿಕೃತ ಸಿವಿಲ್ ಎಂಜಿನಿಯರ್‌ಗಳು ಕಟ್ಟಡ ಕಾಮಗಾರಿಯಲ್ಲಿ ಭಾಗವಹಿಸದೆ, ತಾಂತ್ರಿಕಜ್ಞಾನದ ಕೊರತೆಯಿಂದಾಗಿ ಕಟ್ಟಡಗಳ ಕುಸಿತ, ಸೇತುವೆಗಳಲ್ಲಿ ಬಿರುಕು, ರಸ್ತೆಗಳ ಕಳಪೆ ಕಾಮಗಾರಿ, ಅಣೆಕಟ್ಟೆಗಳಲ್ಲಿ ಬಿರುಕು ಉಂಟಾಗುತ್ತವೆ. ಅಧಿಕೃತ ಪರವಾನಗಿ ಪಡೆದ ಸಿವಿಲ್ ಎಂಜಿನಿಯರ್‌ಗಳೇ ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳಬೇಕು. ಇದಕ್ಕಾಗಿ ಅನುಮೋದನೆಗೊಂಡ ವೃತ್ತಿನಿರತ ಸಿವಿಲ್‌ಎಂಜಿನಿಯರಿಂಗ್ ವಿಧೇಯಕ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಎಂ.ಯು.ಅಶ್ವತ್ಥ್, ಅಜಿತ್ ಕುಮಾರ್, ಎಂ.ಆರ್.ಕಲ್‌ಗಲ್ ಮಾತನಾಡಿದರು.
ಸಾಧಕ ಸಿವಿಲ್ ಎಂಜಿನಿಯರ್‌ಗಳಾದ ಉಜಿರೆಯ ಜಗದೀಶಪ್ರಸಾದ್, ಸಂಪತ್‌ರತ್ನ ರಾವ್, ಸುಭಾಶ್ಚಂದ್ರ ಅವರನ್ನು ಗೌರವಿಸಲಾಯಿತು.
ಉಜಿರೆ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ರವೀಶ್ ಪಡುಮಲೆ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭಕ್ಕೆ ಮೊದಲು ವಾಹನ ಜಾಥಾ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.