ADVERTISEMENT

ಕುಕ್ಕೆ ಸುಬ್ರಹಣ್ಯ: 58 ಭಕ್ತರಿಂದ ಎಡೆಸ್ನಾನ ಸೇವೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 7:31 IST
Last Updated 27 ಡಿಸೆಂಬರ್ 2025, 7:31 IST

ಕುಕ್ಕೆ ದೇವಳದಲ್ಲಿ ಕಿರುಷಷ್ಠಿ ದಿನ ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು

ಕುಕ್ಕೆ ದೇವಳದಲ್ಲಿ ಕಿರುಷಷ್ಠಿ ದಿನ ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು

ಸುಬ್ರಹಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಷಷ್ಠಿಯ ದಿನವಾದ ಶುಕ್ರವಾರ ದೇವಸ್ಥಾನದಲ್ಲಿ 58 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.

ADVERTISEMENT

ಗೋವು ನೈವೇದ್ಯ ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳುವ ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.

ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತರ ಮಾರ್ಗದರ್ಶನ
ದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತ 432 ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯ ಹಾಕಲಾಯಿತು. ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನ ಪ್ರಸಾದವನ್ನು
ತಿಂದವು.

ಹಸುಗಳು ತಿಂದ ಅನ್ನಪ್ರಸಾದದ ಮೇಲೆ ದೇವಳದ ಎದುರಿನ ದರ್ಪಣತೀರ್ಥ ನದಿಯಲ್ಲಿ ಸ್ನಾನ ಮಾಡಿ ನಿಂತಿದ್ದ ಎಲ್ಲ ವಯೋಮಾನದ ಭಕ್ತರು ಸ್ವಯಂಪ್ರೇರಿತರಾಗಿ ಉರುಳು ಸೇವೆ ಕೈಗೊಂಡರು

ಗೋವು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇವರ ಪ್ರಸಾದ ಮತ್ತು ಪ್ರಸಾದ ಭೋಜನ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.