ADVERTISEMENT

ಧರ್ಮಸ್ಥಳ: ‘ನೆರೆ ಪರಿಹಾರಕ್ಕೆ ₹25 ಕೋಟಿ ನೆರವು’- ವೀರೇಂದ್ರ ಹೆಗ್ಗಡೆ ಘೋಷಣೆ

ನೆರವು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 20:15 IST
Last Updated 17 ಆಗಸ್ಟ್ 2019, 20:15 IST
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ   

ಉಜಿರೆ: ರಾಜ್ಯದಲ್ಲಿನ ಪ್ರವಾಹ ಪೀಡಿತ ಕುಟುಂಬಗಳ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ₹ 25 ಕೋಟಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶನಿವಾರ ತಿಳಿಸಿದರು.

‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಇದೇ 19 ರಂದು ಭೇಟಿಯಾಗಿ ಪರಿಹಾರ ಮೊತ್ತ ನೀಡುತ್ತೇನೆ. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಸಮೀಕ್ಷೆಯಂತೆ ರಾಜ್ಯದಲ್ಲಿ 20,827 ಮನೆಗಳಿಗೆ, 28,288 ಕುಟುಂಬಗಳ ಕೃಷಿ ಭೂಮಿಗೆ ಹಾನಿಯಾಗಿದೆ.’ ಎಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

‘ಪಶ್ಚಿಮಘಟ್ಟದಲ್ಲಿ ಭೂ ಕುಸಿತ ಹೆಚ್ಚಾಗುತ್ತಿದ್ದು, ಪಶ್ಚಿಮಘಟ್ಟ ಅಧ್ಯಯನ ಪೀಠ ಸ್ಥಾಪನೆಗೆ
₹ 2 ಕೋಟಿ ನೀಡಲಾಗುವುದು. ವಿಪತ್ತು ನಿರ್ವಹಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎರಡು ಲಕ್ಷ ಸದಸ್ಯರನ್ನೊಳಗೊಂಡ ವಿಪತ್ತು ನಿರ್ವಹಣಾ ವೇದಿಕೆ ರಚಿಸಲಾ
ಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.