ADVERTISEMENT

ಧರ್ಮಸ್ಥಳದಿಂದ ಆಸ್ಪತ್ರೆಗೆ ನೂರು ಸಾಂದ್ರಕ ಕೊಡುಗೆ

​ಪ್ರಜಾವಾಣಿ ವಾರ್ತೆ
Published 20 ಮೇ 2021, 2:27 IST
Last Updated 20 ಮೇ 2021, 2:27 IST

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೂರು ಆಮ್ಲಜನಕ ಸಾಂದ್ರಕಗಳನ್ನು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಶುಶ್ರೂಷೆಗಾಗಿ ಕೊಡುಗೆಯಾಗಿ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಆಮ್ಲಜನಕ ಸಾಂದ್ರಕ ಬ್ಯಾಂಕ್ ಪ್ರಾರಂಭಿಸಿದ್ದು, ಅಲ್ಲಿಗೆ 50 ಯಂತ್ರಗಳನ್ನು ನೀಡಲಾಗಿದೆ. ಅಗತ್ಯ ಇರುವವರ ಮನೆಗಳಿಗೆ ಉಚಿತವಾಗಿ ಯಂತ್ರವನ್ನು ಒದಗಿಸಿ ಬಳಿಕ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ.

ಮಾಹಿತಿಗಾಗಿ ಸಂಪರ್ಕಿಸಿ ಸಂಚಾರ ದೂರವಾಣಿ: 96635 21316 / 9449189041 ಸಂಪರ್ಕಿಸಬಹುದು.

ADVERTISEMENT

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆ ಮತ್ತು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಒಟ್ಟು 10 ಆಮ್ಲಜನಕ ಹೈಫ್ಲೋ ಯಂತ್ರ ಉಚಿತವಾಗಿ ನೀಡಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.