
ಡಿ.ಕೆ.ಶಿವಕುಮಾರ್
ಬೆಳಗಾವಿ: ‘ಧರ್ಮಸ್ಥಳ ವಿಷಯದಲ್ಲಿ ಸತ್ಯ ಹೊರ ಬಂದಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಆಳ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
‘ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು. ಅವರು ಯಾರೂ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಹಾಗಾಗಿ, ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ನಾನು ಧೈರ್ಯದಿಂದ ಹೇಳಿದ್ದೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಚಾರ್ಜ್‌ಶೀಟ್‌ನಲ್ಲಿ ದೂರುದಾರರೇ ಆರೋಪಿಗಳಾದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚಾರ್ಜ್‌ಶೀಟ್ ಪ್ರತಿ ನಾನು ಓದಿಲ್ಲ. ಕಾನೂನಿನಡಿ ಏನು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರ ನಿರ್ಧರಿಸುತ್ತದೆ’ ಎಂದರು.
‘ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಿದೆ. ಕಬ್ಬು ಹಾಗೂ ಮೆಕ್ಕೆಜೋಳ ಖರೀದಿ ವಿಷಯದಲ್ಲಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ವಿಫಲವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೃಹ ಸಚಿವರ ಭೇಟಿಯಾದ ಎಸ್ಐಟಿ ತಂಡ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿದ ಎಸ್‌ಐಟಿ ತಂಡ ಬುಧವಾರ ಬೆಳಗಾವಿಗೆ ಆಗಮಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿತು.
ದ್ವೇಷ ಭಾಷಣ ನಿಯಂತ್ರಣ ವಿಧೇಯಕ’ ನಮ್ಮ ಸರ್ಕಾರದ ಅಜೆಂಡಾ. ರಾಜ್ಯದಲ್ಲಿ ಶಾಂತಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣ ಒಪ್ಪಲು ಸಾಧ್ಯವಿಲ್ಲಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.