
ಪ್ರಜಾವಾಣಿ ವಾರ್ತೆ
ನ್ಯಾಯಾಲಯ
ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯ ವರದಿಗೆ ಸಂಬಂಧಿಸಿದ ವಿಚಾರಣೆಯನ್ನು ಬೆಳ್ತಂಗಡಿ ನ್ಯಾಯಾಲಯ ಡಿ.26ಕ್ಕೆ ಮುಂದೂಡಿದೆ ಎಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಗಳು ತಿಳಿಸಿವೆ.
ನ್ಯಾಯಾಲಯಕ್ಕೆ ಸಲ್ಲಿಸಿರುವುದು ಆರೋಪ ಪಟ್ಟಿಯಲ್ಲ. ಅದು ಸುಳ್ಳು ಹೇಳಿಕೆಗಳ ದೂರಿಗೆ ಸಂಬಂಧಿಸಿದ ವರದಿಯಷ್ಟೆ. ಅದನ್ನು ತಿರಸ್ಕರಿಸುವ ಅಥವಾ ಪುರಸ್ಕರಿಸುವುದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಲು ತಂಡ ಪ್ರಯತ್ನಿಸುತ್ತಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.