ಸಾಕ್ಷಿ ದೂರುದಾರ ಮಾಸ್ಕ್ ಧರಿಸಿರುವವರು
ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುವ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ವಿಚಾರಣೆಗೆ ಒಳಪಡಿಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಅನುಮತಿ ನೀಡಿದೆ.
ಎರಡು ದಿನ ವಿಚಾರಣೆ ಮಾಡಲು ಅವಕಾಶ ನೀಡಲಾಗಿದೆ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಶುಕ್ರವಾರ ತಿಳಿಸಿದ್ದು ಅನುಮತಿಗಾಗಿ ಈ ಮೊದಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಪರಿಶೀಲಿಸಿದ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
‘ಸಾಕ್ಷಿ ದೂರುದಾನಿಗೆ ನೇರ ಸಂಬಂಧವಿರುವ ಅನೇಕ ವಿಷಯಗಳನ್ನು ಎಸ್‌ಐಟಿ ಬಯಲು ಮಾಡಿದೆ. ಆತನನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿದರೆ ಮತ್ತಷ್ಟು ವಿಷಯಗಳು ಬಹಿರಂಗಗೊಳ್ಳುವ ಸಾಧ್ಯತೆ ಇದೆ. ನಮಗೆ ಲಿಭಿಸಿದ ಮಾಹಿತಿಗೆ ಇದರಿಂದ ಇನ್ನಷ್ಟು ಪುಷ್ಟಿ ಸಿಗಲಿದೆ’ ಎಂದು ಅಧಿಕಾರಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.