ADVERTISEMENT

ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಾಕ್ಷಿ ದೂರುದಾರ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 22:30 IST
Last Updated 26 ಡಿಸೆಂಬರ್ 2025, 22:30 IST
   

ಬೆಳ್ತಂಗಡಿ : ಧರ್ಮಸ್ಥಳ ದಲ್ಲಿ ನಡೆದಿದೆ ಎನ್ನಲಾಗುವ ಅಪರಾಧ ಪ್ರಕರಣಗಳ ಸಾಕ್ಷಿ ದೂರುದಾರ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಮಧ್ಯಾಹ್ನ 12 ಗಂಟೆಗೆ ಬಂದ ಆತ, ಎಸ್ಐಟಿ ಕಚೇರಿಗೆ ತೆರಳಿ ಸಹಿ ಹಾಕಿ ವಾಪಸಾಗಿದ್ದಾನೆ.

ಫೋನ್‌ಗಾಗಿ ಅರ್ಜಿ: ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ವಶಪಡಿಸಿಕೊಂಡಿ
ರುವ ತಮ್ಮ ಮೊಬೈಲ್ ಫೋನ್‌ಗಳನ್ನು ಬಿಟ್ಟುಕೊಡಲು ಸೂಚಿಸಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಮತ್ತು ಸೌಜನ್ಯಾ ಪರ ಹೋರಾಟಗಾರ ಗಿರೀಶ್
ಮಟ್ಟೆಣ್ಣನವರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಈ ಕುರಿತ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಲಾಗಿದೆ.

ADVERTISEMENT

ಆದೇಶ ಮುಂದೂಡಿಕೆ: ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವರದಿಯ ಕುರಿತು ಅಂತಿಮ ಆದೇಶ ನೀಡುವಂತೆ ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ
ಯನ್ನೂ ನ್ಯಾಯಾಲಯ ಡಿ. 29ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.