
ಚಿನ್ನಯ್ಯ
ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅಲಿಯಾಸ್ ಚಿನ್ನ ಎಸ್. ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಪೊಲೀಸ್ ರಕ್ಷಣೆ ಕೋರಿದ್ದಾನೆ.
‘ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಬಳಿಕ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾವಣೆಯಾದ ಈ ಪ್ರಕರಣದಲ್ಲಿ ತನಗೆ ಹಾಗೂ ತನ್ನ ಪತ್ನಿಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ ಎಂಬವರು ಜೀವ ಬೆದರಿಕೆ ಹಾಕಬಹುದು. ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕು ಎಂದು ಚಿನ್ನಯ್ಯ ಇದೇ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿಯನ್ನು ಸಲ್ಲಿಸಿದ್ದಾನೆ. ಈ ಮನವಿಯನ್ನು ಸ್ವೀಕರಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.