
ಪ್ರಜಾವಾಣಿ ವಾರ್ತೆ
ಧರ್ಮಸ್ಥಳ ಪ್ರಕರಣ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿರುವ ಪ್ರಕರಣದ ಸಾಕ್ಷಿದೂರುದಾರ ದಿನಬಿಟ್ಟು ದಿನ ಬೆಳ್ತಂಗಡಿಯ ವಿಶೇಷ ತನಿಖಾ ದಳದ (ಎಸ್‌ಐಟಿ) ಕಚೇರಿಗೆ ಹಾಜರಾಗಬೇಕಾಗಿದೆ.
ಜಾಮೀನು ನೀಡುವಾಗ ವಿಧಿಸಿರುವ ಷರತ್ತಿನಂತೆ ಆತ ನ್ಯಾಯಾಲಯದ ನಿರ್ದೇಶನ ಪಾಲಿಸಿ, ಎಸ್‌ಐಟಿ ಠಾಣೆಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ದಿನಬಿಟ್ಟು ದಿನ ಠಾಣೆಯಲ್ಲಿ ಹಾಜರಿ ಹಾಕಬೇಕಾಗುತ್ತದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಶಿವಮೊಗ್ಗ ಜೈಲಿನಲ್ಲಿದ್ದ ಸಾಕ್ಷಿ ದೂರುದಾರನನ್ನು ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.