ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕುರುಹು ಗುರುವಾರ ಪತ್ತೆಯಾಯಿತು. ಸಾಕ್ಷಿ ದೂರುದಾರನ ಹೇಳಿಕೆಯಂತೆ ಗುರುತಿಸಿದ್ದ 13 ಜಾಗಗಳ ಪೈಕಿ, ಆರನೇ ಜಾಗದಲ್ಲಿ ಗಂಡಸಿನ ಮೃತದೇಹದ ಅವಶೇಷ ಪತ್ತೆಯಾಗಿದೆ. ‘ಮೃತದೇಹದ ಕುರುಹು ಸಿಕ್ಕಿದೆ. ಅದು ಗಂಡಸಿನ ಮೃತದೇಹದ ಅವಶೇಷದಂತಿದೆ’ ಎಂದು ಎಸ್ಐಟಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.