
ಸಾಕ್ಷಿ ದೂರುದಾರ (ಕಡತ ಚಿತ್ರ)
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳ ಪ್ರಕರಣದ ಸಾಕ್ಷಿ ದೂರುದಾರ ಜಾಮೀನು ಕೋರಿ ಕಾನೂನು ಸೇವಾ ಪ್ರಾಧಿಕಾರ ಒದಗಿಸಿದ ವಕೀಲರ ಮೂಲಕ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾನೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವವಿಶೇಷ ತನಿಖಾ ತಂಡವು ಸಾಕ್ಷಿದೂರು
ದಾರನನ್ನು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಬಂಧಿಸಿತ್ತು. ಆತ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ವಾದ: ಈ ಪ್ರಕರಣದ ಸಾಕ್ಷಿ ದೂರುದಾರ ಸೇರಿ ಆರು ಮಂದಿ ಯಾವ ರೀತಿ ಕೋರ್ಟ್ ದಾರಿ ತಪ್ಪಿಸಿದ್ದಾರೆ ಎಂಬ ಕುರಿತುಎಸ್‌ಐಟಿ ಬೆಳ್ತಂಗಡಿಯ ಜೆಎಂಎಫ್‌ಸಿ ಕೋರ್ಟ್‌ಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 215 ಅಡಿ ಗುರುವಾರ ವರದಿ ಸಲ್ಲಿಸಿದೆ.
ಸಾಕ್ಷಿ ದೂರುದಾರ ಹೊರತುಪಡಿಸಿ ಉಳಿದವರುವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಎಸ್‌ಐಟಿ ಪರ ವಕೀಲರು ವಾದ ಮಂಡಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.