ADVERTISEMENT

ಧರ್ಮಸ್ಥಳ: ಚುನಾವಣಾ ಪ್ರಚಾರ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 4:37 IST
Last Updated 2 ಡಿಸೆಂಬರ್ 2021, 4:37 IST
ಸಚಿವ ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಧರ್ಮಸ್ಥಳದಲ್ಲಿ ಬುಧವಾರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು.
ಸಚಿವ ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಧರ್ಮಸ್ಥಳದಲ್ಲಿ ಬುಧವಾರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು.   

ಉಜಿರೆ: ವಿಧಾನ ಪರಿಷತ್ ಚುನಾವಣೆ ಪ್ರಚಾರ ನಿಮಿತ್ತ ಸಚಿವರಾದ ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ, ಇತರ ಕಾರ್ಯಕರ್ತರೊಂದಿಗೆ ಬುಧವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ದೇವರ ದರ್ಶನದ ಬಳಿಕ ಉಜಿರೆ ಹಾಗೂ ಅಳದಂಗಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡಬಿದ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT