ADVERTISEMENT

ಧರ್ಮಸ್ಥಳ: ಸುಳ್ಳು ಮಾಹಿತಿ ನೀಡಿದ ಆರೋಪ; ವಕೀಲ ಮಂಜುನಾಥ್‌ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 21:03 IST
Last Updated 22 ಆಗಸ್ಟ್ 2025, 21:03 IST
<div class="paragraphs"><p>ಪೊಲೀಸ್ – ಪ್ರಾತಿನಿಧಿಕ ಚಿತ್ರ</p></div>

ಪೊಲೀಸ್ – ಪ್ರಾತಿನಿಧಿಕ ಚಿತ್ರ

   

ಮಂಗಳೂರು: ಧರ್ಮಸ್ಥಳ ಗ್ರಾಮದ ಪ್ರಕರಣದ ಸಂಬಂಧ ಎಸ್‌ಐಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ವಕೀಲ ಮಂಜುನಾಥ್‌ ಎನ್‌. ವಿರುದ್ಧ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ರಘುರಾಮ ಶೆಟ್ಟಿ ದೂರು ನೀಡಿದ್ದು, ಮಂಜುನಾಥ ಎನ್. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಬಿಎನ್‌ಎಸ್‌ ಕಲಂ 353(1)(ಬಿ), 353 (2) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಮೃತದೇಹಗಳ ಅವಶೇಷ ಪತ್ತೆಗೆ ಅಗೆಯುವ ಪ್ರಕ್ರಿಯೆ ಕುರಿತು ಜುಲೈ 30 ರಂದು ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವಂತೆ ಅನಧಿಕೃತ ವಿವರಗಳಿದ್ದ ವಿವರಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಮಂಜುನಾಥ ಪ್ರಸಾರ ಮಾಡಿದ್ದಾರೆ. ಆ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಠಾಣೆ ಮುಂದೆ ಹಾಜರಾದ ಗಿರೀಶ

ಗಿರೀಶ ಮಟ್ಟೆಣ್ಣನವರ ಶನಿವಾರ ಬೆಳ್ತಂಗಡಿ ಠಾಣೆ ಮುಂದೆ ಹಾಜರಾದರು. ಈ ವೇಳೆ ಮಾತನಾಡಿದ ಅವರು ‘ತಿಮರೋಡಿ ಬಂಧಿಸಲು 100ರಷ್ಟು ಪೊಲೀಸರು ಗುರುವಾರ ಬಂದಿದ್ದರು. ಮನೆಯವರು ಆತಂಕಕ್ಕೆ ಒಳಗಾಗಿದ್ದರು. ನಾವೇ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದೆವು. ಈಗ ಎಫ್‌ಐಆರ್‌ ದಾಖಲಾಗಿದೆ. ಬಂಧಿಸುವುದಾದರೆ ಬಂಧಿಸಲಿ ಎಂದು ಠಾಣೆಗೆ ಹಾಜರಾಗಿದ್ದೇನೆ’ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ದೂರು

ಧರ್ಮಸ್ಥಳದ ಅವಹೇಳನ ಮಾಡುವುದಕ್ಕಾಗಿ ಸುಜಾತಾ ಭಟ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಧರ್ಮಸ್ಥಳ ಠಾಣೆಗೆ ಗುರುವಾರ ದೂರು ಸಲ್ಲಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.