
ಮದುವೆ (ಪ್ರಾತಿನಿಧಿಕ ಚಿತ್ರ)
(ಐಸ್ಟೋಕ್ ಚಿತ್ರ)
ಉಜಿರೆ (ದಕ್ಷಿಣ ಕನ್ನಡ): ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏ.29ರಂದು ಸಂಜೆ 6.40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 2ನೇ ವಿವಾಹಕ್ಕೆ ಅವಕಾಶವಿಲ್ಲ.
ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ.
‘ಮದುವೆ ಆಗಲು ಇಚ್ಛಿಸುವವರು 2026ರ ಏ. 25ರೊಳಗೆ ಸವಿವರ, ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ 08256– 266644, ವಾಟ್ಸ್‌ಆ್ಯಪ್ ಸಂಖ್ಯೆ 9663464648, 8147263422 ಸಂಪರ್ಕಿಸಬಹುದು.
ವರದಕ್ಷಿಣೆ, ಮದುವೆಯ ದುಂದುವೆಚ್ಚ ತಡೆಯಲು ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಈ ವರೆಗೆ 13 ಸಾವಿರ ಜೋಡಿ ಮದುವೆಯಾಗಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.