
ಪ್ರಜಾವಾಣಿ ವಾರ್ತೆ
ಲಕ್ಷ ದೀಪೋತ್ಸವ ಅಂಗವಾಗಿ ಗುರುವಾರ ನಸುಕಿನಲ್ಲಿ ನಡೆದ ರಥೋತ್ಸವದಲ್ಲಿ ಶ್ರದ್ಧೆ ಭಕ್ತಿಯಿಂದ ಪಾಲ್ಗೊಂಡ ಲಕ್ಷಗಟ್ಟಲೆ ಭಕ್ತರು ರಾತ್ರಿಯಿಡೀ ನಿದ್ದೆಗೆಟ್ಟು ಕಾದು ಕುಳಿತಿದ್ದರು. ಸಾಗರೋಪಾದಿಯಲ್ಲಿ ಭಕ್ತ ಸಮೂಹ ‘ಮಾತು ಬಿಡದ ಮಂಜುನಾಥ’ನಲ್ಲಿಗೆ ಸಾಗಿ ಬಂದಿತ್ತು. ಲಕ್ಷ ದೀಪೋತ್ಸವ ಪ್ರಯುಕ್ತ ದೇವಸ್ಥಾನ, ಬೀದಿಗಳನ್ನು ಹೂವುಗಳು, ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿತ್ತು. ಗೌರಿ ಮಾರುಕಟ್ಟೆ ಉತ್ಸವದೊಂದಿಗೆ ಲಕ್ಷ ದೀಪೋತ್ಸವ ಸಂಪನ್ನಗೊಂಡಿತು. 2025ರ ಲಕ್ಷದೀಪೋತ್ಸವದ ಸಂಪೂರ್ಣ ಚಿತ್ರಣ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.