ADVERTISEMENT

ಧರ್ಮಸ್ಥಳ ಯೋಜನೆ ಜನೋಪಯೋಗಿ: ಕೆ. ಭುವನಾಭಿರಾಮ ಉಡುಪ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 6:16 IST
Last Updated 25 ಅಕ್ಟೋಬರ್ 2025, 6:16 IST
ಬಜಪೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಭುವನಾಭಿರಾಮ ಉಡುಪ ಉದ್ಘಾಟಿಸಿದರು 
ಬಜಪೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಭುವನಾಭಿರಾಮ ಉಡುಪ ಉದ್ಘಾಟಿಸಿದರು    

ಪ್ರಜಾವಾಣಿ ವಾರ್ತೆ

ಮೂಲ್ಕಿ: ಡಾ.ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯಿಂದ ಈ ಸಮಾಜದಲ್ಲಿ ಜನೋಪಯೋಗಿ ಕಾರ್ಯಕ್ರಮಗಳನ್ನು ನಡೆಸುತಿದ್ದು ಸಾಮಾನ್ಯ ಗ್ರಾಮೀಣ ಭಾಗದ ರೈತಾಪಿ ಜನರಿಗೆ ಉತ್ತಮ ಸವಲತ್ತುಗಳು ದೊರೆಯುತ್ತಿದೆ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವ ಮೂಲಕ ಸಮಾಜದಲ್ಲಿ ಸ್ವಂತ ನೆಲೆಯಲ್ಲಿ ನಿಂತಿದ್ದಾರೆ ಎಂದು ಜನಜಾಗೃತಿಯ ಮಾಜಿ ಅಧ್ಯಕ್ಷ ಕೆ. ಭುವನಾಭಿರಾಮ ಉಡುಪ ಹೇಳಿದರು.

ಅವರು ಬಜಪೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜನೆಯಲ್ಲಿ ಕಿನ್ನಿಗೋಳಿಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಯೋಜನಾಧಿಕಾರಿ ಗಿರೀಶ್ ಕುಮಾರ್ ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದ ಜನರಿಗೆ ಶೈಕ್ಷಣಿಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಯೋಜನೆಯು ಉಪಯೋಗವಾಗುತ್ತಿದ್ದು ಇದರಿಂದ ಮಧ್ಯಮ ವರ್ಗದ ಜನರಿಗೆ ತುಂಬಾ ಸಹಾಯವಾಗಿದೆ. ಜ್ಞಾನವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಲು ಸಹಾಯವಾಗಿದೆ ಎಂದರು.

ಕಿನ್ನಿಗೋಳಿ ರೋಟರಿ ಕ್ಲಬ್‌ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ, ಧನಂಜಯ ಶೆಟ್ಟಗಾರ್, ಇನ್ನರ್‌ವೀಲ್ ಅಧ್ಯಕ್ಷೆ ರೇಖಾ ರಘುರಾಮ ಶೆಟ್ಟಿ, ಜ್ಞಾನವಿಕಾಸ ಸಮನ್ವಯಧಿಕಾರಿ ಶೋಭಾ, ಧನಂಜಯ, ಸೇವಾ ಪ್ರತಿನಿಧಿ ಕಮಲ, ವಿಶಾಲಾಕ್ಷಿ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.