
ಉಜಿರೆ: ‘ಶ್ರದ್ಧಾ- ಭಕ್ತಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ದೀರಿ. ನಿಮ್ಮ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡುಹೋಗಿ. ವೈಯಕ್ತಿಕ ಸುಖಕ್ಕಾಗಿ ಪ್ರಾರ್ಥಿಸುವ ಬದಲು ನಮಗೆ, ಸಮಾಜಕ್ಕೆ ಕಲ್ಯಾಣವಾಗಲಿ ಎಂಬ ಪ್ರಾರ್ಥನೆ ನಿಮ್ಮದಾಗಲಿ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ.
ಶಿವರಾತ್ರಿ ಅಂಗವಾಗಿ ಧರ್ಮಸ್ಥಳದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಮೂಹಿಕವಾಗಿ ‘ಓಂ ನಮಃ ಶಿವಾಯ’ ಪಠಿಸಿದರು.
ಹೇಮಾವತಿ ವೀ.ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ, ಮರಿಯಪ್ಪ, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಭಾಗವಹಿಸಿದ್ದರು.
ಅನ್ನದಾಸೋಹ: ಬೆಂಗಳೂರಿನ ಭಕ್ತರು 1.75 ಲಕ್ಷ ಮಂದಿಗೆ ಉಚಿತವಾಗಿ ಅನ್ನದಾಸೋಹ ವ್ಯವಸ್ಥೆ ಮಾಡಿದ್ದರು. ಅನ್ನಪೂರ್ಣ ಭೋಜನಾಲಯದ ಹಿಂಬದಿಯ ಮೈದಾನ ಮತ್ತು ಹೈಸ್ಕೂಲ್ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.