ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ಸಲ್ಲಿಸಲು ‘ಸಹಾಯವಾಣಿ’ ಸ್ಥಾಪಿಸಬೇಕು ಎಂದು ಸರ್ಕಾರವನ್ನು ವಕೀಲ ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.
‘ಮಗಳು ಅನನ್ಯಾ 2003ರಲ್ಲಿ ಧರ್ಮಸ್ಥಳ ದೇಗುಲಕ್ಕೆ ಹೋಗಿದ್ದಾಗ ನಾಪತ್ತೆಯಾಗಿದ್ದಳು’ ಎಂದು ದೂರು ಸಲ್ಲಿಸಿರುವ ಬೆಂಗಳೂರಿನ ಸುಜಾತಾ ಭಟ್ ಅವರಿಗೆ ಮಂಜುನಾಥ ಅವರು ಕಾನೂನು ಸಲಹೆಗಾರರಾಗಿದ್ದಾರೆ.
‘ದುರಂತಗಳ ಬಗ್ಗೆ ಎಸ್‌ಐಟಿಗೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಆದರೆ, ಸ್ಥಳೀಯ ಠಾಣೆಗೆ ನೀಡಲು ಹಿಂದೇಟು ಹಾಕುತ್ತಿದ್ದಾರೆ.ಅಲ್ಲದೆ, ದೂರು ಸ್ವೀಕರಿಸಲು ಎಸ್‌ಐಟಿ ಕಚೇರಿಯನ್ನು ‘ಪೊಲೀಸ್ ಠಾಣೆ’ ಎಂದು ಅಧಿಸೂಚನೆ ಹೊರಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.