ADVERTISEMENT

ದೇವಾಲಯಗಳಲ್ಲಿ ನಿರಂತರ ಸೇವೆ ನಡೆಯಲಿ: ವೀರೇಂದ್ರ ಹೆಗ್ಗಡೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 12:41 IST
Last Updated 5 ಮೇ 2025, 12:41 IST
ಮೂಡುಬಿದಿರೆಯ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಲಾಯಿತು
ಮೂಡುಬಿದಿರೆಯ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಲಾಯಿತು   

ಮೂಡುಬಿದಿರೆ: ದೇವಾಲಯಗಳನ್ನು ಭಕ್ತರು ಸದೃಢಗೊಳಿಸಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಇಟಲ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಸುಬ್ರಹ್ಮಣ್ಯದ ಸಂಪುಟನರಸಿಂಹಸ್ವಾಮಿ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ದೇವರು ಎಲ್ಲೆಡೆಯೂ ಇದ್ದಾನೆ. ದೇವರ ಸಾನ್ನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನ್ನಿಧ್ಯವನ್ನು ಉಳಿಸುವ ಜವಾಬ್ದಾರಿ ಭಕ್ತರ ಮೇಲಿದೆ ಎಂದರು.

ADVERTISEMENT

ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. 

ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಆಶೀರ್ವಚನ ನೀಡಿದರು.

ಪ್ರಮುಖರಾದ ಕೆ.ಅಭಯಚಂದ್ರ ಜೈನ್, ಧರ್ಮಸ್ಥಳದ ಶ್ರದ್ಧಾ ಅಮಿತ್, ಉದ್ಯಮಿಗಳಾದ ಶಶಿಧರ ಶೆಟ್ಟಿ, ಕೆ.ಶ್ರೀಪತಿ ಭಟ್, ಗೋಪಾಲ ಶೆಟ್ಟಿ, ನವೀನ್ ಶೆಟ್ಟಿ ರೆಂಜಾಳ, ವಕೀಲ ಎಂ.ಕೆ. ವಿಜಯಕುಮಾರ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ದರೆಗುಡ್ಡೆ ಗ್ರಾ.ಪಂ.ಅಧ್ಯಕ್ಷ ಅಶೋಕ ಶೆಟ್ಟಿ, ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಪಣಪಿಲ ಅರಮನೆಯ ಭರತ್ ಕುಮಾರ್, ಅನುವಂಶೀಯ ಆಡಳಿತ ಮೊಕ್ತೇಸರ ಬಿ.ವಿಮಲ್‌ಕುಮಾರ್‌ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯಾಧ್ಯಕ್ಷ ಸಂತೋಷ್ ಕೆ.ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಕೇಶ್ ಶೆಟ್ಟಿ, ಪೂರನ್‌ವರ್ಮ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್ ಭಾಗವಹಿಸಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಪ್ರಮೋದ ಆರಿಗ ಸ್ವಾಗತಿಸಿದರು. ನಿರಂಜನ ಎ.ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.