ADVERTISEMENT

ಧರ್ಮಸ್ಥಳ: ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 5:56 IST
Last Updated 21 ನವೆಂಬರ್ 2022, 5:56 IST
   

ಉಜಿರೆ (ದಕ್ಷಿಣ ಕನ್ನಡ): ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ಅವರು ಸೋಮವಾರ ಬೆಳಿಗ್ಗೆ ಶಂಕುಸ್ಥಾಪನೆ ನೆರವೇರಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ್ (ರಾಜು ಗೌಡ), ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನ್ ರಾಜ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ, ಧರ್ಮಸ್ಥಳ ಗ್ರಾಮ ಪಂಚಾಯತಿ ಅಧ್ಯಕ್ಷರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT