ADVERTISEMENT

ರಾಜ್ಯಕ್ಕೆ ಅಗೌರವ: ಸಚಿವ ದಿನೇಶ್ ಗುಂಡೂರಾವ್ ಆಕ್ಷೇಪ

ಎನ್‌ಎಂಪಿಎ ಸುವರ್ಣ ಮಹೋತ್ಸವಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ– ಆರೋಪ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 0:08 IST
Last Updated 13 ನವೆಂಬರ್ 2025, 0:08 IST
<div class="paragraphs"><p>ದಿನೇಶ್ ಗುಂಡೂರಾವ್</p></div>

ದಿನೇಶ್ ಗುಂಡೂರಾವ್

   

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ನ.13ರಂದು ಏರ್ಪಡಿಸಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ನೀಡದೇ ಶಿಷ್ಟಾಚಾರ ಉಲ್ಲಂಘಿಸಿದೆ. ರಾಜ್ಯ ಸರ್ಕಾರಕ್ಕೆ ಅಗೌರವ ತೋರಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಕ್ಷೇಪಿಸಿದ್ದಾರೆ.

ಕೇಂದ್ರ ಬಂದರು, ನೌಕಾ ಮತ್ತು ಜಲಯಾನ ಸಚಿವ ಸರ್ಬಾನಂದ ಸೋನೊವಾಲ್‌,  ಸಚಿವಾಲಯದ ಕಾರ್ಯದರ್ಶಿ ವಿಜಯ್‌ ಕುಮಾರ್‌, ಎನ್ಎಂಪಿಎ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅವರಿಗೆ ಈ ಕುರಿತು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಸಚಿವರು, ‘ರಾಜ್ಯ ಸರ್ಕಾರಕ್ಕೆ ಅಗೌರವ ತೋರಿರುವ ಮತ್ತು ಶಿಷ್ಟಾಚಾರ ಉಲ್ಲಂಘಿಸಿರುವ ಕೇಂದ್ರ ಬಂದರು, ನೌಕಾ ಮತ್ತು ಜಲ ಯಾನ ಸಚಿವಾಲಯದ ಕಾರ್ಯದರ್ಶಿ ವಿಜಯ್‌ ಕುಮಾರ್‌ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೂ ಪತ್ರದ ಪ್ರತಿ ಕಳುಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.