ADVERTISEMENT

ಸುಳ್ಳನ್ನು ಸತ್ಯ ಮಾಡುವುದೇ ಆರ್‌ಎಸ್‌ಎಸ್‌ ತರಬೇತಿ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 6:48 IST
Last Updated 30 ಆಗಸ್ಟ್ 2024, 6:48 IST
<div class="paragraphs"><p>ದಿನೇಶ್ ಗುಂಡೂರಾವ್</p></div>

ದಿನೇಶ್ ಗುಂಡೂರಾವ್

   

– ಪ್ರಜಾವಾಣಿ ಚಿತ್ರ

ಮಂಗಳೂರು: ಪ್ರಾಸಿಕ್ಯೂಶನ್ ವಿಚಾರ ನ್ಯಾಯಾಲಯ ತೀರ್ಮಾನಿಸುತ್ತದೆ, ಆದರೆ, ರಾಜ್ಯಪಾಲರ ಪಕ್ಷಪಾತಿ ನಡೆ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.

ADVERTISEMENT

ಮೈಸೂರು ಮೂಡಾ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆದೇಶ ಕಾಯ್ದಿರಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಅಧಿಕಾರ ದುರುಪಯೋಗ ಮಾಡಿಲ್ಲ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಎಂದರು.

ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.

ಸುಳ್ಳನ್ನು ಸತ್ಯ ಮಾಡುವುದೇ ಆರ್.ಎಸ್.ಎಸ್ ನ ತರಬೇತಿಯಾಗಿದೆ. ಆರ್ ಎಸ್ ಎಸ್ ಇದನ್ನೇ ತರಬೇತಿ ಕೊಡುವುದು,

ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂದು ತರಬೇತಿ ನೀಡುತ್ತಾರೆ ಎಂದು ಟೀಕಿಸಿದರು.

ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೇ ತರಬೇತಿ ಇರುತ್ತದೆ. ಅದನ್ನೇ ಇಲ್ಲಿ ಸಹ ಮಾಡಲು ಹೊರಟಿದ್ದಾರೆ

ನಮಗೆ ಯಾವುದೇ ಭಯ ಇಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.