ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವ ರಾಜ್ಯಪಾಲರು, ಕೇಂದ್ರ ಸರ್ಕಾರದ ಕೈ ಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗುಂಡೂರಾವ್ ಆರೋಪಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರರು ಹೇಗಾದರೂ ಮಾಡಿ
ಸಿದ್ದರಾಮಯ್ಯ ಅವರನ್ನು ಹಗರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಹೀಗಾಗಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ದೂರು ಪಡೆದು ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ಯಾವುದೇ ಕಾನೂನು ತಜ್ಞರ ಜೊತೆಗೆ ಚರ್ಚಿಸದೆ, ನೂರಾರು ಪುಟಗಳ ದೂರು ಪಡೆದು ಕೆಲವೇ ಗಂಟೆಗಳಲ್ಲಿ ನೊಟೀಸ್ ನೀಡಿದ್ದಾರೆ ಎಂದು ಆರೋಪಿಸಿದರು.
ಕಾನೂನು ಪ್ರಕಾರ ಸಿದ್ದರಾಮಯ್ಯ ಏನು ತಪ್ಲು ಮಾಡಿದ್ದಾರೆ ತೋರಿಸಲಿ.
ಸಿದ್ದರಾಮಯ್ಯ ಪತ್ನಿ ಕಳೆದುಕೊಂಡ ಭೂಮಿ ವಾಪಾಸ್ ಪಡೆದಿದ್ದಾರೆ.
ಮುಡಾದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಇದ್ದ ಬೋರ್ಡ್ ಇತ್ತು. ಆಗಲೂ ಅನೇಕರಿಗೆ ಭೂಮಿ ನೀಡಲಾಗಿದೆ. ಈಗ ಬಿಜೆಪಿಯವರ ಪಾದಯಾತ್ರೆಗೆ ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಪಾದಯಾತ್ರೆಗೆ ಅಧಿಕೃತ ವಾಗಿ ಅನುಮತಿ ನೀಡಲಾಗದು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಅವರಿಗೆ ಅವಕಾಶ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರ ಸರ್ಕಾರ ಐಟಿ, ಇಡಿ ಎಲ್ಲವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದೆ.
ದೇಶದ ಅನೇಕ ರಾಜ್ಯಗಳಲ್ಲಿ ಇಂತಹುದೇ ಸ್ಥಿತಿ ಇದೆ. ಶೇ
95ರಷ್ಟು ಇಡಿ, ಐಟಿ ದಾಳಿಗಳು ವಿರೋಧ ಪಕ್ಷಗಳ ಮೇಲೆ ಆಗಿವೆ ಎಂದು ಅವರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.