
ಮಂಗಳೂರು: ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ ‘ಕೊರಗಜ್ಜ’ ಚಿತ್ರದ ಹಾಡುಗಳನ್ನು ಝೀ ಮ್ಯೂಸಿಕ್ ಮೂಲಕ ನಮ್ಮ ಚಿತ್ರತಂಡ 300ಕ್ಕೂ ಹೆಚ್ಚು ಆಡಿಯೊ ವೇದಿಕೆಗಳಲ್ಲಿ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೇವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣದಲ್ಲಿರುವ ‘ಕೊರಗಜ್ಜ’ ಚಿತ್ರದ ದೈವದ ಬಗ್ಗೆ ರೀಲ್ಸ್ ಮಾಡಿ ಎಂದು ಹೇಳಿಲ್ಲ. ನಮ್ಮ ಮಾತನ್ನು ಕೆಲವು ಕಡೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ ತಿಳಿಸಿದ್ದಾರೆ.
‘ಈಗಾಗಲೇ ದೈವಗಳ ಬಗ್ಗೆ ಮತ್ತು ದೈವದ ಆರಾಧನಾ ಕ್ರಮಗಳಾದ ಕೋಲ, ನೇಮ, ತಂಬಿಲ, ಅಗೆಲು...ಹೀಗೆ ದೈವದ ವಿಚಾರವಾಗಿ ಸಹಸ್ರಾರು ರೀಲ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಾಗಿರುವಾಗ ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ ಏರ್ಪಡಿಸಿದರೆ ತಪ್ಪೇನು? ನಮ್ಮ ಹಾಡುಗಳಿಗೆ ರೀಲ್ಸ್ ಮಾಡುವ ಸ್ಪರ್ಧೆಗೆ ಆಕ್ಷೇಪಣೆ ಒಡ್ಡುತ್ತಿದ್ದಾರೆ. ನಮ್ಮ ಸಿನಿಮಾಗೆ ಪ್ರತಿ ಹಂತದಲ್ಲಿ ತೊಂದರೆ ಕೊಡುವುದು, ಆಕ್ಷೇಪಣೆ ಮಾಡುವುದು, ವಿರೋಧಿಸುವುದು ನಡೆಯುತ್ತಲೇ ಬಂದಿದೆ. ಕೊರಗಜ್ಜನ ಆಶೀರ್ವಾದದಿಂದ ಅಗ್ನಿ ಪರೀಕ್ಷೆ ದಾಟಿ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.