ADVERTISEMENT

ಮಂಗಳೂರು: ಕೋವಿಡ್‌–19 ಮಾರ್ಗಸೂಚಿ ಉಲ್ಲಂಘಿಸುವವರಿಗೆ ಡಿಸಿ ಪಾಠ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 11:25 IST
Last Updated 22 ಮಾರ್ಚ್ 2021, 11:25 IST
   

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸೋಮವಾರ ಅಧಿಕಾರಿಗಳೊಂದಿಗೆ ಮಾಲ್‌, ಬಸ್‌ ನಿಲ್ದಾಣ, ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದರು.

ಮಾಸ್ಕ್‌ ಧಾರಣೆ, ಸ್ಯಾನಿಟೈಸರ್‌ ಬಳಕೆ, ಸುರಕ್ಷಿತ ಅಂತರ ಸೇರಿದಂತೆ ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸದವರಿಗೆ ಪಾಠ ಹೇಳಿದರು. ಕೆಲ ಅಂಗಡಿಗಳಲ್ಲಿ ಮಾಸ್ಕ್‌ ಧಾರಣೆ ಕಡ್ಡಾಯ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ರೀತಿ ಮುಂದುವರಿದರೆ ಅಂಗಡಿ ಬಂದ್‌ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸುರಕ್ಷಿತ ಅಂತರವನ್ನು ಕಾಪಾಡುವ ಮೂಲಕ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.