ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 21 ಮಂದಿ ಕೋವಿಡ್ ಸೊಂಕಿಗೆ ಒಳಪಟ್ಟಿರುವುದು ಮಂಗಳವಾರ ದೃಢಪಟ್ಟಿದೆ. ಕೊರೋನಾ ಸೋಂಕಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 40 ಮಂದಿ ಸೊಂಕು ಹೊಂದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ಪ್ರಮಾಣ ಶೇ 2.47ಕ್ಕೆ ಹೆಚ್ಚಳವಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,35,779 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಅವರಲ್ಲಿ 1,33,887 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 1,852 ಮಂದಿ ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.