ADVERTISEMENT

ತಾಯಂದಿರ ಬಾಳು ಬೆಳಗಿದ 'ನವೋದಯ': ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 10 ಮೇ 2025, 7:59 IST
Last Updated 10 ಮೇ 2025, 7:59 IST
<div class="paragraphs"><p>ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ನವೋದಯ ಸ್ವ–ಸಹಾಯ ಗುಂಪುಗಳ ರಜತ ಸಂಭ್ರಮ</p></div>

ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ನವೋದಯ ಸ್ವ–ಸಹಾಯ ಗುಂಪುಗಳ ರಜತ ಸಂಭ್ರಮ

   

ಮಂಗಳೂರು: ಇಪ್ಪತ್ತೈದು ವರ್ಷಗಳ ಹಿಂದೆ ಪ್ರಾರಂಭಿಸಿರುವ ನವೋದಯ ಸ್ವ-ಸಹಾಯ ಗುಂಪು ಲಕ್ಷಾಂತರ ತಾಯಂದಿರು, ಅವರ ಕುಟುಂಬದಲ್ಲಿ ಜ್ಯೋತಿ ಬೆಳಗಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ನ ನವೋದಯ ಸ್ವ–ಸಹಾಯ ಗುಂಪುಗಳ ರಜತ ಸಂಭ್ರಮದ ಅಂಗವಾಗಿ ನಗರದ ಹೊರವಲಯದ ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು‌.

ADVERTISEMENT

ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ವೇಳೆ ನಾನು ಸಹಕಾರ ಸಚಿವನಾಗಿದ್ದಾಗ 25 ವರ್ಷಗಳ ಹಿಂದೆ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಅನ್ನು ಉದ್ಘಾಟಿಸಿದ್ದೆ. ಅಂದು ಬೆಳಗಿದ ಜ್ಯೋತಿ ಇಂದಿಗೂ ಲಕ್ಷಾಂತರ ಕುಟುಂಬಗಳನ್ನು ಬೆಳಗುತ್ತಿದೆ ಎಂದರು.

ಹೆಣ್ಣು ಕುಟುಂಬದ ಕಣ್ಣು. ಅವರಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದು ಅಂದು ಸ್ತ್ರೀಶಕ್ತಿ ಸಂಘ ಪ್ರಾರಂಭಿಸಿ, ಸರ್ಕಾರದಿಂದ ಕಾರ್ಯಕ್ರಮ ರೂಪಿಸಿದ್ದೆವು. ರಾಜೇಂದ್ರ ಕುಮಾರ್‌ ಅಂದಿನಿಂದ ಇಂದಿನವರೆಗೂ ಕರಾವಳಿ ಕ್ಷೇತ್ರದಲ್ಲಿ ಸಹಕಾರಿ ಧುರೀಣರಾಗಿ, ಯಾವುದೇ ಸ್ಥಾನ ಅಪೇಕ್ಷಿಸದೆ, ಜನರ- ತಾಯಂದಿರ ಸೇವೆ ಮಾಡಬೇಕು ಎಂದು ನವೋದಯ ಚಾರಿಟಬಲ್‌ ಟ್ರಸ್ಟ್‌ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಟ್ರಸ್ಟ್ ಸಂಸ್ಥಾಪಕ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಒಂಬತ್ತು ಜಿಲ್ಲೆಗಳಲ್ಲಿ‌ ಇರುವ ಸಂಘವನ್ನು ಇನ್ನೊಂದೆರಡು ಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದರು.

ದೇಶದ ಸೈನಿಕರಿಗೆ ಬೆಂಬಲ‌ ನೀಡಲು ಸೈನಿಕ ಕಲ್ಯಾಣ ನಿಧಿಗೆ ₹3 ಕೋಟಿ ನೆರವನ್ನು ನೀಡಲಾಗುವುದು ಎಂದು ಹೇಳಿದರು.

ಪೇಜಾವರ ಮಠಾಧೀಶ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಅಶೋಕ ಕುಮಾರ್ ರೈ, ಐವನ್ ಡಿಸೋಜ, ಎಸ್.‌ಎಲ್. ಭೋಜೇಗೌಡ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್, ಮಾಜಿ ಸಚಿವ ಮುರುಗೇಶ ನಿರಾಣಿ, ನವದೆಹಲಿಯ ಇಫ್ಕೊ ವ್ಯವಸ್ಥಾಪಕ ನಿರ್ದೇಶಕ ಉದಯ ಶಂಕರ ಅವಸ್ಥಿ, ಜಯವರ್ಮ ಬಲ್ಲಾಳ, ಐಕಳ ಹರೀಶ್ ಶೆಟ್ಟಿ, ರಮಾನಾಥ ರೈ, ಇನಾಯಿತ್ ಅಲಿ, ವಿನಯಕುಮಾರ್ ಸೊರಕೆ, ಪದ್ಮರಾಜ್ ಪೂಜಾರಿ, ಸಂಜೀವ ಮಠಂದೂರು ಉಪಸ್ಥತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.