ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ಇಬ್ಬರು ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇದುವರಗೆ ಒಟ್ಟು ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.
‘ದೀಪಕ್ ರಾಜೇಶ್ ಕುವೆಲ್ಲೊ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ. ಅವರು ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
12,839 ಲೀಟರ್ ಮದ್ಯ ವಶ:
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದಂದಿನಿಂದ ಶನಿವಾರದವರೆಗೆ ಜಿಲ್ಲೆಯಲ್ಲಿ ₹ 41.88 ಲಕ್ಷ ಮೌಲ್ಯದ 12,839 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 15.5 ಕೆ.ಜಿ ನಿಷೇಧಿತ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ₹ 8.70 ಲಕ್ಷ ಎಂದು ಅಂದಾಜಿಸಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಒಟ್ಟು 227 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.