ADVERTISEMENT

ಫಾದರ್‌ ಮುಲ್ಲರ್ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 4:20 IST
Last Updated 2 ಜುಲೈ 2021, 4:20 IST
ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ರಿಚರ್ಡ್ ಅಲೋಶಿಯಸ್ ಕೊವೆಲ್ಲೊ ಉದ್ಘಾಟಿಸಿದರು.
ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ರಿಚರ್ಡ್ ಅಲೋಶಿಯಸ್ ಕೊವೆಲ್ಲೊ ಉದ್ಘಾಟಿಸಿದರು.   

ಮಂಗಳೂರು: ನಗರದ ಫಾದರ್ ಮುಲ್ಲರ್ ಹೋಮಿಯೊಪತಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕೊವೆಲ್ಲೊ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಫಾದರ್ ರೋಷನ್ ಕ್ರಾಸ್ತಾ, ಫಾದರ್ ಜಿ.ಬಿ. ಕ್ರಾಸ್ತಾ, ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಇ.ಎಸ್.ಜೆ.ಪ್ರಭು, ಉಪ ಪ್ರಾಂಶುಪಾಲ ಡಾ. ವಿಲ್ಮಾ ಮೀರಾ ಡಿಸೋಜ, ಪಿಜಿ ಅಕಾಡೆಮಿಕ್ ಉಸ್ತುವಾರಿ ಡಾ. ಜೋತ್ಸ್ನಾ ಶಿವಪ್ರಸಾದ್ ಅವರು ಡಾ. ಬಿ.ಸಿ. ರಾಯ್ ಅವರ ಭಾವಚಿತ್ರ ಪುಷ್ಪ ಅರ್ಪಿಸಿದರು.

ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿಯ ಪ್ರಾಧ್ಯಾಪಕ ಡಾ.ಮಡೋನಾ ಜೋಸೆಫ್ ಅವರನ್ನು ಸನ್ಮಾನಿಸಲಾಯಿತು. ಡಾ. ಮಡೋನಾ ಜೋಸೆಫ್ ಅವರು ಕಾಲೇಜಿನಲ್ಲಿ 30 ವರ್ಷ ಅಧ್ಯಾಪಕರಾಗಿ ಕೆಲಸ ಮಾಡಿದ ಅನುಭವಗಳನ್ನು ಹಂಚಿಕೊಂಡರು.

ADVERTISEMENT

‘ಸಾಂಕ್ರಾಮಿಕ ಕಾಯಿಲೆ ಸಂದರ್ಭದಲ್ಲಿ ಕೋವಿಡ್ ಯೋಧರಾಗಿ ಕಾರ್ಯನಿರ್ವಹಿಸಿದ ವೈದ್ಯರ ಸೇವೆ ಶ್ಲಾಘನೀಯ’ ಎಂದು ಅಧ್ಯಕ್ಷತೆ ವಹಿಸಿದ್ದ ರಿಚರ್ಡ್ ಅಲೋಶಿಯಸ್ ಕೊಯೆಲೊ ಹೇಳಿದರು. ಡಾ.ಸಂತಿ ದೀಪನ್ ಮತ್ತು ಡಾ. ಆಡ್ಲಿನ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ವೀಕ್ಷಣೆಗೆ ಆನ್‌ಲೈನ್‌ನಲ್ಲಿ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.