ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ಕೌಟುಂಬಿಕ ಕಲಹದಿಂದಾಗಿ ಗುರುವಾರ ಬೆಳಿಗ್ಗೆ ಪತಿಯು ಪತ್ನಿಯನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಗೀಡಾದ ಮಹಿಳೆ ಝೀನತ್ (40) ಎಂದು ಗುರುತಿಸಲಾಗಿದೆ.
ಆಕೆಯ ಪತಿ ರಫೀಕ್ (45) ಆರೋಪಿ. ಗುರುವಾರ ಬೆಳಿಗ್ಗೆ ಅವರೊಳಗೆ ಜಗಳ ಉಂಟಾಗಿ ಆರೋಪಿ ರಫೀಕ್ ಪತ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡ ಝೀನತ್ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರಿಗೆ 18 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಹತ್ತನೇ ಹಾಗೂ 9ನೇ ತರಗತಿಯಲ್ಲಿ ಕಲಿಯುತ್ತಿರುವ ಇಬ್ಬರು ಮಕ್ಕಳಿದ್ದಾರೆ.
ಪತಿ ಪೊಲೀಸ್ ವಶಕ್ಕೆ?: ಆರೋಪಿ ರಫೀಕ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪೊಲೀಸರು ಇದನ್ನು ನಿರಾಕರಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ರಾಜೇಂದ್ರ, ಡಿವೈಎಸ್‌ಪಿ ಅರುಣ್ ನಾಗೇಗೌಡ, ಗ್ರಾಮಾಂತರ ಇನ್‌ಸ್ಪೆಕ್ಟರ್ ರವಿ ಬಿ.ಎಸ್., ಎಸ್.ಐ. ಅವಿನಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.