ADVERTISEMENT

ಸರ್ಕಾರಿ ಶಾಲೆಗಳ ಮೇಲೆ ಕೀಳರಿಮೆ ಬೇಡ: ಸುಚರಿತ ಶೆಟ್ಟಿ

ವಿದ್ಯಾಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 3:59 IST
Last Updated 11 ಜೂನ್ 2025, 3:59 IST
ಮೂಡುಬಿದಿರೆಯ ಕಡಂದಲೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ ಮಂಗಳವಾರ ನೋಟ್ ಪುಸ್ತಕಗಳನ್ನು ವಿತರಿಸಿದರು
ಮೂಡುಬಿದಿರೆಯ ಕಡಂದಲೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ ಮಂಗಳವಾರ ನೋಟ್ ಪುಸ್ತಕಗಳನ್ನು ವಿತರಿಸಿದರು   

ಮೂಡುಬಿದಿರೆ: ಸರ್ಕಾರಿ ಶಾಲೆ ಸಮಾಜದ ಆಸ್ತಿ. ಪ್ರಾಥಮಿಕ ಶಿಕ್ಷಣ, ಆರೋಗ್ಯಕ್ಕೆ ಸರ್ಕಾರ ಉತ್ತಮ ಸೇವೆಯನ್ನು ನೀಡುತ್ತಿದ್ದು, ಮಕ್ಕಳು ಇದರ ಪ್ರಯೋಜನ ಪಡೆಯಬೇಕು. ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಸಲ್ಲದು. ರೋಟರಿಯಂತಹ ಸಂಸ್ಥೆಗಳು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ತಮ್ಮದೇ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಕೆಎಂಎಫ್ ನಿರ್ದೇಶಕ ಕೆ.ಪಿ.ಸುಚರಿತ ಶೆಟ್ಟಿ ಹೇಳಿದರು.

ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್, ಹಳೇ ವಿದ್ಯಾರ್ಥಿ ಸಂಘ ಹಾಗೂ ದಾನಿಗಳು ಸಹಯೋಗದಲ್ಲಿ ಇಲ್ಲಿನ ಕಡಂದಲೆ ವಿದ್ಯಾಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಮಂಗಳವಾರ ವಿತರಿಸಿ ಮಾತನಾಡಿದರು.

ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ ನಿಯೋಜಿತ ಅಧ್ಯಕ್ಷ ಹರೀಶ್ ಎಂ.ಕೆ., ಸರ್ಕಾರಿ ಶಾಲೆಯ ಮಕ್ಕಳು ಸವಲತ್ತುಗಳಿಂದ ವಂಚಿತರಾಗಬಾರದು ಎಂದರು.

ADVERTISEMENT

ನಿಯೋಜಿತ ಕಾರ್ಯದರ್ಶಿ ಭರತ್ ಶೆಟ್ಟಿ, ಸದಸ್ಯ ಶಂಕರ್ ಎ.ಕೋಟ್ಯಾನ್, ನಿವೃತ್ತ ಶಿಕ್ಷಕಿ ನಿರ್ಮಲ ಆರ್.ಪಂಡಿತ್, ಉದ್ಯಮಿ ರಾಜೇಶ್ ಕೋಟ್ಯಾನ್, ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ್ ಸಾಲ್ಯಾನ್, ಉಪಾಧ್ಯಕ್ಷ ಪ್ರಣೀತಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಪೂಪಾಡಿಕಲ್ಲು, ಮುಖ್ಯಶಿಕ್ಷಕಿ ಪ್ರತಿಭಾ ಎಂ.ಪಿ, ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೋ, ಸುಮನಾ ಎಚ್.ಸಿ.ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.