ADVERTISEMENT

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ. ಯಶೋವರ್ಮ ನಿಧನ

​ಪ್ರಜಾವಾಣಿ ವಾರ್ತೆ
Published 23 ಮೇ 2022, 10:56 IST
Last Updated 23 ಮೇ 2022, 10:56 IST
ಡಾ.ಬಿ. ಯಶೋವರ್ಮ
ಡಾ.ಬಿ. ಯಶೋವರ್ಮ   

ಉಜಿರೆ: ಇಲ್ಲಿನ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಉಜಿರೆ ನಿವಾಸಿ ಡಾ.ಬಿ. ಯಶೋವರ್ಮ (67) ಭಾನುವಾರ ತಡರಾತ್ರಿ ಸಿಂಗಪುರದಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಅವರು ಸಿಂಗಪುರಕ್ಕೆ ಹೋಗಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಪೆರಾಡಿ ಬೀಡು ನಿವಾಸಿಯಾದ ಅವರು, ಮೂಡುಬಿದಿರೆ ಜೈನ್ ಹೈಸ್ಕೂಲಿನ 'ಕನ್ನಡ ಪಂಡಿತ'ರೆಂದೇ ಚಿರಪರಿಚಿತರಾಗಿದ್ದ ದಿವಂಗತ ಟಿ. ರಘು ಚಂದ್ರ ಶೆಟ್ಟಿ ಅವರ ಮಗ.

ADVERTISEMENT

ಸಸ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾದ ಅವರು ಧಾರವಾಡದಲ್ಲಿ ಜೆಎಸ್‌ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಬಳಿಕ ಉಜಿರೆಯ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತರಾದ ಬಳಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದರು.

ಉತ್ತಮ ವಾಗ್ಮಿ, ಶಿಸ್ತಿನ ಸಿಪಾಯಿ, ನೇರ ನಡೆ-ನುಡಿಯ ಅವರು ದಕ್ಷ ದಕ್ಷ ಆಡಳಿತಗಾರರಾಗಿದ್ದರು.

ಉಜಿರೆಯನ್ನು ಜಾಗತಿಕ ನಕಾಶೆಯಲ್ಲಿ ಗುರುತಿಸುವಂತೆ ಭಗೀರಥ ಪ್ರಯತ್ನ ಮಾಡಿರುವ ಅವರು, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಅವರ ಸಹೋದರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.