
ಪುುತ್ತೂರು: ಪ್ರಚೋದನಕಾರಿ ಧ್ವೇಷ ಭಾಷಣ ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಮತ್ತೆ ರಿಲೀಫ್ ದೊರಕಿದೆ. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಹಿಂದೆ ಬಂಧನ ಸಹಿತ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಕಾಯ್ದಿರಿಸಿ, ಬುಧವಾರ ಮತ್ತೆ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.
ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅ.20ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆದ `ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು, ಸಾರ್ವಜನಿಕವಾಗಿ ಧಾಮರ್ಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾಮರ್ಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿರುವುದಾಗಿ ಆರೋಪಿಸಿ, ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ನಿವಾಸಿ,ಕನರ್ಾಟಕ ರಾಜ್ಯ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಂಪ್ಯ ಠಾಣೆಯ ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಅ.30ರಂದು ಕಲಂ 35(3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟೀಸು ಜಾರಿಗೊಳಿಸಿದ್ದರು.
ಕಲ್ಲಡ್ಕ ಪ್ರಭಾಕರ ಭಟ್ ಮಧ್ಯಂತರ ಅಜರ್ಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.