ಮಂಗಳೂರು: ವಾಹನ ಚಾಲನಾ ತರಬೇತಿ ಸಂಸ್ಥೆಗಳು ಎದುರಿಸುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ದಕ್ಷಿಣ ಕನ್ನಡ ಜಿಲ್ಲಾ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಎಂಬ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಇದರ ವಿಧ್ಯುಕ್ತ ಉದ್ಘಾಟನೆ ಫೆ.8ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯಲ್ಲಿ ಹಲವಾರು ವಾಹನ ಚಾಲನಾ ತರಬೇತಿ ಸಂಸ್ಥೆಗಳು ಇವೆ. ಇವುಗಳನ್ನು ಒಗ್ಗೂಡಿಸಿ, ಬಲಯುತವಾದ ಸಂಘಟನೆ ಕಟ್ಟಲು ಅಸೋಸಿಯೇಷನ್ ರಚಿಸಲಾಗಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅಧ್ಯಕ್ಷತೆ ವಹಿಸುವರು. ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ. ಮಲ್ಲಾಡ್, ಪುತ್ತೂರು ಆರ್‌ಟಿಒ ವಿಶ್ವನಾಥ ಅಜಿಲ, ಬಂಟ್ವಾಳ ಸಹಾಯಕ ಪ್ರಾದೇಶಿಕ ಅಧಿಕಾರಿ ಚರಣ್ ಕೆ., ರಾಜ್ಯ ಮೋಟಾರು ವಾಹನ ಚಾಲನಾ ತರಬೇತಿ ಶಾಲೆಗಳ ಮಾಲೀಕರ ಒಕ್ಕೂಟದ ಅಧ್ಯಕ್ಷ ಆನಂದ ಪಾಟೀಲ, ಕಾರ್ಯದರ್ಶಿ ಎಚ್.ಸಿ ನಾಗರಾಜ್ ಭಾಗವಹಿಸುವರು ಎಂದರು.
ಅಸೋಸಿಯೇಶನ್ ಉಪಾಧ್ಯಕ್ಷ ಪ್ರಶಾಂತ್ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಜತೆ ಕಾರ್ಯದರ್ಶಿ ಸರ್ವಮಂಗಳಾ, ಕೋಶಾಧಿಕಾರಿ ಶಾಲಿನಿ ಈಶ್ವರಚಂದ್ರ ಭಟ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.