ADVERTISEMENT

Drone Ban Mangaluru | ಮಂಗಳೂರು: ಡ್ರೋನ್‌ ಹಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 10 ಮೇ 2025, 11:29 IST
Last Updated 10 ಮೇ 2025, 11:29 IST
   

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಡ್ರೋನ್‌ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು ಇದೇ 14ರ ಸಂಜೆ 4 ಗಂಟೆಯವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣಾಧಿಕಾರಿಗಳು ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್‌ಗಳ ಬಳಕೆ/ಹಾರಾಟವಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಈ ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.