ಮಂಗಳೂರು: ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರು ನಗರದ ‘ಸೆನ್’ ಅಪರಾಧ ಠಾಣೆ ಪೊಲೀಸರು ಮೈಸೂರಿನಲ್ಲಿ ಭಾನುವಾರ ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಧ್ರುವ ಡಿ. ಶೆಟ್ಟಿ ಬಂಧಿತ ಆರೋಪಿ.
ಮಾದಕ ವಸ್ತು ಪೂರೈಸುತ್ತಿದ್ದ ಬಗ್ಗೆ ಜುಲೈ 2ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪ ಧ್ರುವ ಡಿ. ಶೆಟ್ಟಿ ಮೇಲಿತ್ತು.
ಆರೋಪಿಯಿಂದ ಒಂದು ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.