ADVERTISEMENT

ಮಂಗಳೂರು: ಮಾದಕ ವಸ್ತು, ಪಿಸ್ತೂಲ್ ಹೊಂದಿದ್ದ ಡ್ರಗ್ ಪೆಡ್ಲರ್‌ಗಳ ಬಂಧನ

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 6:57 IST
Last Updated 21 ಜುಲೈ 2023, 6:57 IST
   

ಮಂಗಳೂರು: ನಗರದಲ್ಲಿ ಮಾದಕ ವಸ್ತು (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಕೃಷ್ಣಾಪುರ ನಿವಾಸಿ ಮೊಹಮ್ಮದ್ ನಿಯಾಜ್ (28), ತಲಪಾಡಿಯ ನಿಷಾದ್ (31), ಮಹಮ್ಮದ್ ರಝೀನ್ (24) ಬಂಧಿತರು.

ಆರೋಪಿಗಳು ಕಾರಿನಲ್ಲಿ ಬಂದು ಉಳ್ಳಾಲ ತಾಲ್ಲೂಕು ತಲಪಾಡಿ ಗ್ರಾಮದ ಪಿಲಿಕೂರಿನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಂಗಳೂರು ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಒಟ್ಟು 180 ಗ್ರಾಂ ತೂಕದ ₹9ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ ಕುಮಾರ್ ಜೈನ್ ತಿಳಿಸಿದರು.

ADVERTISEMENT

ಬಂಧಿತರಿಂದ ಎರಡು ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್, ₹22,050 ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ ಎಂದರು.

ಮುಂಬೈ ಗೋವಾದಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು ಎಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ. ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.