ADVERTISEMENT

ಡ್ರಗ್ಸ್: ನೈಜೀರಿಯಾ ಪ್ರಜೆ ಸೇರಿ ಇಬ್ಬರು ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:22 IST
Last Updated 2 ಅಕ್ಟೋಬರ್ 2020, 16:22 IST

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವ ನೈಜೀರಿಯಾ ಪ್ರಜೆ ಸೇರಿದಂತೆ ಇಬ್ಬರನ್ನು ಇದೇ 4 ರವರೆಗೆ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ನೈಜೀರಿಯ ಪ್ರಜೆ ಫ್ರಾಂಕ್ ಸಂಡೇ ಇಬೆಬುಚಿ ಹಾಗೂ ಕೂಳೂರು ಗುಡ್ಡೆಯಂಗಡಿಯ ಶಮೀನ್ ಫರ್ನಾಂಡಿಸ್ ಯಾನೆ ಶ್ಯಾಮ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ತೊಕ್ಕೊಟ್ಟು ನಿವಾಸಿ ಶಾನ್ ನವಾಝ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ನೈಜೀರಿಯಾ ಪ್ರಜೆ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರು ಹಾಗೂ ಮುಂಬೈಯಲ್ಲಿ ಬಂಧಿಸಿದ್ದರು. ಮುಂಬೈ, ಗೋವಾ, ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಮಂಗಳೂರು ನಗರಕ್ಕೆ ಎಂಡಿಎಂಎ ಮಾದಕ ವಸ್ತು ಸಾಗಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ADVERTISEMENT

ಬಂಧಿತ ಎಲ್ಲ ಆರೋಪಿಗಳಿಗೆ ಕೋವಿಡ್‌–19 ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.