ಬೆಳ್ತಂಗಡಿ (ದಕ್ಷಿಣ ಕನ್ನಡ): ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತವುಂಟಾಗಿ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ.
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ರಸ್ತೆ ಸಂಪೂರ್ಣ ಬಂದ್ ಆಗಿರುವ ಬಗ್ಗೆ ಬಂದಾರು ಗ್ರಾಮ ಪಂಚಾಯಿತಿ ವತಿಯಿಂದ ಬಂದಾರು ಹಾಗೂ ಪೆರ್ಲ ಬೈಪಾಡಿಯಲ್ಲಿ ಪ್ರಕಟಣೆಯ ಬ್ಯಾನರ್ ಅಳವಡಿಸಲಾಗಿದೆ. ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು ಮೈರೋಳ್ತಡ್ಕ -ಶಿವನಗರ - ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ಮಾಹಿತಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.