ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.
ಘಾಟ್‌ನ ಎರಡನೇ ತಿರುವಿನಲ್ಲಿ ಮಂಗಳವಾರ ಮರವೊಂದು ರಸ್ತೆಗೆ ಬಿದ್ದಿದೆ. ಸೋಮವಾರ ರಾತ್ರಿ ಘಾಟ್‌ನ ಕೆಲವೆಡೆ ಭೂಕುಸಿತ ಉಂಟಾಗಿತ್ತು. ಕೂಡಲೇ ತೆರವು ಕಾರ್ಯಾಚರಣೆ ನಡೆಯಿತು.
ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿರುವುದರಿಂದ ಯಾವುದೇ ಅನಾಹುತ ಆಗಿಲ್ಲ.
ಪುತ್ತೂರು ತಾಲ್ಲೂಕಿನಲ್ಲಿ 9.6 ಸೆಂ.ಮೀ, ಬೆಳ್ತಂಗಡಿ ತಾಲ್ಲೂಕಿನಲ್ಲಿ 9.2 ಸೆಂ.ಮೀ. ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.