ADVERTISEMENT

ನಕಲಿ ಖಾತೆ ಸೃಷ್ಟಿ: ಮಂಗಳೂರು ವಿ.ಸಿ.ಯಿಂದ ದೂರು

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 4:53 IST
Last Updated 7 ಜುಲೈ 2022, 4:53 IST

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್‌.ಯಡಪಡಿತ್ತಾಯ ಅವರ ಭಾವಚಿತ್ರ ಬಳಸಿ ನಕಲಿ ವಾಟ್ಸ್‌ಆ್ಯಪ್ ಸೃಷ್ಟಿಸಿ, ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜು ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸಂದೇಶ ಕಳುಹಿಸಿ, ಗಿಫ್ಟ್ ಕಾರ್ಡ್ ಪಡೆಯುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪ್ರೊ. ಯಡಪಡಿತ್ತಾಯ ಸೈಬರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳಿಸಿದ ಸಂಖ್ಯೆಗೆ ಪ್ರೊ. ಯಡಪಡಿತ್ತಾಯರ ಭಾವಚಿತ್ರವನ್ನು ಹಾಕಲಾಗಿತ್ತು. ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಸಹೋದ್ಯೋಗಿಗಳಿಗೆ ಇದೇ ಸಂಖ್ಯೆಯಿಂದ ಸಂದೇಶ ಕಳುಹಿಸಿ, ಅಮೆಝಾನ್ ಗಿಫ್ಟ್ ಕಾರ್ಡ್ ಪಡೆಯುವಂತೆ ತಿಳಿಸಲಾಗಿತ್ತು. ಕಾಲೇಜಿನ ಪ್ರಾಚಾರ್ಯರೊಬ್ಬರು, ಈ ವಿಷಯವನ್ನು ಕುಲಪತಿ ಗಮನಕ್ಕೆ ತಂದಿದ್ದು, ತಕ್ಷಣ ಜಾಗೃತರಾದ ಯಡಪಡಿತ್ತಾಯರು, ಈ ಸಂಖ್ಯೆ ತಮ್ಮದಲ್ಲವೆಂದು ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. ‘ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿರುವ ಭಾವಚಿತ್ರ ಹಾಗೂ ಸಂಪರ್ಕ ಸಂಖ್ಯೆಗಳನ್ನು ಸೈಬರ್ ಕಳ್ಳರು ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದೆ’ ಎಂದು ಪ್ರೊ. ಯಡಪಡಿತ್ತಾಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT